Wednesday, January 28, 2026
18.8 C
Bengaluru
Google search engine
LIVE
ಮನೆ#Exclusive NewsTop Newsಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ

ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ.

ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಒಡೆತನದ ಶಾಲೆಗೆ ತಮಿಳು ಭಾಷೆಯಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ‌ ಹಾಕಲಾಗಿದೆ. ಸಂದೇಶ ಕಂಡ ಕೂಡಲೆ ಶಾಲೆಯ ಸಿಬ್ಬಂದಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಶರಣ್ಣಪ್ಪ ಎಸ್.ಡಿ ಅವರು ಶಾಲೆಯಲ್ಲಿ ಆರ್​​ಡಿಎಕ್ಸ್​​ ಇಟ್ಟು ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಬಂದಿದೆ. ತಮಿಳುನಾಡಿನ ರಾಜಕೀಯ ಪಕ್ಷವೊಂದರ ಹೆಸರು ಇದರಲ್ಲಿ ತಿಳಿಸಲಾಗಿದೆ. ಶಾಲೆಯ ಸಂಪೂರ್ಣ ತಪಾಸಣೆ ನಡೆಸಲಾಗಿದೆ. ಇದಕ್ಕೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಬಾಂಬ್​​ ನಿಷ್ಕ್ರಿಯ ದಳ, ಶ್ವಾನದಳ​​ ಪರಿಶೀಲನೆ ನಡೆಸಿದೆ. ಮೇಲ್​​ನಲ್ಲಿ ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಮಿಳು ಮೇಲ್ ಐಡಿಯಿಂದ ಇ-ಮೇಲ್ ಸಂದೇಶ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments