Top Newsಜಿಲ್ಲೆ

ಪಟಾಕಿ ಸಿಡಿಸಿ ಬಾಲಕ ಸಾವು ಕೇಸ್​; ಆಯೋಜಕರ ವಿರುದ್ಧ FIR ದಾಖಲು

ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿ ಬಸವರಾಜ್​ ಆದೇಶ ಹೊರಡಿಸಿದ್ದಾರೆ. ಪ್ರಕರಣ ಹಿನ್ನೆಲೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆ ನಿಷೇಧಿಸಿದ್ದು, ಒಂದು ವೇಳೆ ಪಟಾಕಿ ಬಳಕೆ‌ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್​ ಆದೇಶ ಹೊರಡಿಸಿದ್ದಾರೆ.

ಇನ್ನು ಘಟನೆ ಸಂಬಂಧ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 105, 125 (A)ರಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button