bengaluru

ಶಾಲಾ ಕೊಠಡಿ ಒಳಗೆ ಕುಸಿದು ಬಿದ್ದು ಬಾಲಕ ಸಾವು!

Boy dies after collapsing inside school room!

ಬೆಂಗಳೂರು : ಶಾಲಾ ಕೊಠಡಿ ಒಳಗೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಲಕ ಅರ್ಹಾನ್ ಪಾಷಾ ಮೃತಪಟ್ಟಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಜೂನ್ 10 ರಂದು ನಡೆದಿದ್ದ ಘಟನೆ ಇದೀಗ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಅರ್ಹಾನ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವ ದೃಶ್ಯ ಶಾಲೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗು ತರಗತಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರೂ, ಶಾಲೆಯ ಸಿಬ್ಬಂದಿ ಕೂಡಲೇ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸುಮಾರು 45 ನಿಮಿಷ ಶಾಲೆಯಲ್ಲೇ ವಿದ್ಯಾರ್ಥಿ ಮೃತದೇಹ ಇಟ್ಟುಕೊಂಡಿದ್ದರು. ನಂತರ ಪೋಷಕರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಪೋಷಕರು ಆಸ್ಪತ್ರೆಗೆ ಬೈಕ್​​ನಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಸದ್ಯ UDR ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯದ ಬಗ್ಗೆ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button