ದೇಶದಾದ್ಯಂತ ಒಯೊ ಸಂಸ್ಥೆ ಹೋಟೆಲ್‌ಗಳನ್ನು ಹೊಂದಿದೆ. ಕಡಿಮೆ ದರದಲ್ಲಿ ವಸತಿ ಸೌಕರ್ಯ ಕಲ್ಪಿಸುತ್ತದೆ. ಆದರೆ, ಓಯೋ ಕೊಠಡಿಯಲ್ಲಿ ಅಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿವೆ. ಅದರಲ್ಲೂ ಅವಿವಾಹಿತರು ಕೊಠಡಿಗಳನ್ನು ತೆಗೆದುಕೊಂಡು ಡೇಟಿಂಗ್ ಸ್ಥಳವನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಹೆಚ್ಚಾಗಿ ಕೇಳಿ ಬಂದವು.
ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್ ಬುಕ್ಕಿಂಗ್ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳು ಹೆಸರಾಗಿದ್ದವು. ಅದರಲ್ಲೂ ಅವಿವಾಹಿತರಿಗೆ ಹೋಟೆಲ್ ಚೆಕ್ ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಸದ್ಯ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ.