Top Newsದೇಶ/ವಿದೇಶರಾಜಕೀಯಸುದ್ದಿಹಣಕಾಸು

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!

ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐತಿಹಾಸಿಕ ಘೋಷಣೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ರಾಷ್ಟ್ರಪತಿಗಳಿಗೆ ಸಲ್ಲಿಕೆಯಾಗಿದ್ದ 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಒಪ್ಪಿಕೊಂಡಿದೆ. ಇದರ ಅನ್ವಯ, 2026-27ನೇ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒಟ್ಟು 1.4 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಹಂಚಿಕೆ ಮಾಡಲಾಗುವುದು. ಇದು ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಹೆಚ್ಚಿನ ಬಲ ತುಂಬಲಿದ್ದು, ಬಾಕಿ ಇರುವ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಕಾಯಕಲ್ಪ: ಈ ಅನುದಾನವನ್ನು ಪ್ರಮುಖವಾಗಿ ಎರಡು ಆಯಾಮಗಳಲ್ಲಿ ಬಳಸಲು ಕೇಂದ್ರ ಸೂಚಿಸಿದೆ:
ಪಂಚಾಯತ್‌ಗಳ ಬಲವರ್ಧನೆ, ಹಳ್ಳಿಗಳಲ್ಲಿ ಸುಸಜ್ಜಿತ ರಸ್ತೆ, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಸುಧಾರಣೆ. ಮಗು ನಗರ ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ವಿಸ್ತರಣೆ, ಸಾರಿಗೆ ವ್ಯವಸ್ಥೆಯ ಮೇಲ್ದರ್ಜೆ ಮತ್ತು ಆಧುನಿಕ ಮೂಲಸೌಕರ್ಯ ನಿರ್ಮಾಣ ಮಾಡಲಾಗುವುದು. ರಾಜ್ಯಗಳು ತಮ್ಮ ಸ್ಥಳೀಯ ಸಮಸ್ಯೆಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಲು ಆರ್ಥಿಕ ಸ್ವಾತಂತ್ರ್ಯವನ್ನು ನೀಡುತ್ತದೆ. ವಿಶೇಷವಾಗಿ ಅಭಿವೃದ್ಧಿಶೀಲ ರಾಜ್ಯಗಳಿಗೆ ಈ ನಿಧಿ ಮೈಲಿಗಲ್ಲಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಒಟ್ಟಾರೆ ಈ ಬಾರಿಯ ಬಜೆಟ್ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಎತ್ತಿ ಹಿಡಿದಿದೆ. 1.4 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯು ಹಳ್ಳಿ ಮತ್ತು ನಗರಗಳ ನಡುವಿನ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ವಿಕಸಿತ ಭಾರತ ನಿರ್ಮಾಣದತ್ತ ರಾಜ್ಯಗಳನ್ನು ಜೊತೆಗೂಡಿಸಿಕೊಂಡು ಹೋಗುವ ದೊಡ್ಡ ಹೆಜ್ಜೆಯಾಗಿದೆ.

Comments (0)

Your email address will not be published. Required fields are marked *

Back to top button