Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ. ಜನವರಿ 31ರಿಂದ ಆರಂಭವಾಗುವ ಬಜೆಟ್ ಅಧಿವೇಶನ ಏಪ್ರಿಲ್ 4ರವರೆಗೆ ಎರಡು ಹಂತಗಳಲ್ಲಿ ನಡೆಯಲಿದೆ. ಅಧಿವೇಶನದ ಮೊದಲ ಹಂತವು ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ.

ಎರಡನೇ ಹಂತವು ಮಾರ್ಚ್ 10ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿರುವುದು ಇದು 8ನೇ ಬಾರಿ. ಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಜನವರಿ 30 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಿತು. ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರಂದು ಮುಕ್ತಾಯಗೊಳ್ಳಲಿದೆ.

ರಾಷ್ಟ್ರಪತಿ ಭಾಷಣದ ಮೇಲೆ ಮೂರು ದಿನಗಳ ಕಾಲ ಚರ್ಚೆ ನಡೆಯಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ ಮತ್ತು 2024-25ರ ವಿವಿಧ ಸೂಚಕಗಳ ಒಳನೋಟಗಳನ್ನು ನೀಡುತ್ತದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments