Wednesday, February 11, 2026
19.8 C
Bengaluru
Google search engine
LIVE
ಮನೆ#Exclusive Newsಬಜೆಟ್ ಧಮಾಕಾ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಬರೋಬ್ಬರಿ 45 ಸಾವಿರ ರೂ....

ಬಜೆಟ್ ಧಮಾಕಾ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಬರೋಬ್ಬರಿ 45 ಸಾವಿರ ರೂ. ಕುಸಿತ!

ಕೇಂದ್ರ ಬಜೆಟ್ ಮಂಡನೆ ಆರಂಭಕ್ಕೂ ಮುನ್ನವೇ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕಂಡುಬಂದಿದೆ.

ಕಳೆದ ಹಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆಯು ಬಜೆಟ್ ಮಂಡನೆಯ ದಿನವಾದ ಇಂದು ಹಠಾತ್ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,47,200 ರೂ. ಆಗಿದ್ದರೆ, 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,60,580 ರೂ. ಗೆ ಇಳಿಕೆಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಪ್ರತಿ ಗ್ರಾಂಗೆ 700 ರಿಂದ 900 ರೂಪಾಯಿಗಳಷ್ಟು ಕಡಿತವಾಗಿರುವುದು ಆಭರಣ ಕೊಳ್ಳುವವರಿಗೆ ದೊಡ್ಡ ಸಮಾಧಾನ ತಂದಿದೆ.

ಚಿನ್ನಕ್ಕಿಂತಲೂ ಹೆಚ್ಚಾಗಿ ಬೆಳ್ಳಿಯ ಬೆಲೆಯಲ್ಲಿ ಇಂದು ಅತಿ ದೊಡ್ಡ ಕುಸಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ ಬರೋಬ್ಬರಿ 45,000 ರೂ. ನಷ್ಟು ಇಳಿಕೆಯಾಗುವ ಮೂಲಕ 3,50,000 ರೂ. ಗೆ ತಲುಪಿದೆ. ಅಂದರೆ, ಪ್ರತಿ ಗ್ರಾಂ ಬೆಳ್ಳಿಯ ಬೆಲೆ ಈಗ 350 ರೂ. ಆಗಿದೆ. ಮದುವೆ ಸೀಸನ್ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಬೆಳ್ಳಿಯ ದರದಲ್ಲಿನ ಈ ಭಾರಿ ಇಳಿಕೆ ಮಧ್ಯಮ ವರ್ಗದ ಜನರಿಗೆ ವರದಾನವಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದಿನ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಬಹುದು ಎಂಬ ಭಾರಿ ನಿರೀಕ್ಷೆ ಇರುವುದು ಕೂಡ ಮಾರುಕಟ್ಟೆಯ ಈ ಧನಾತ್ಮಕ ಚಲನೆಗೆ ಕಾರಣವಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments