ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವ ರಾಜ್ಯ ಬಿಜೆಪಿ ಈ ವಿಚಾರವನ್ನು ಬಿಜೆಪಿ ವರಿಷ್ಠರಿಗೆ ವರದಿ ನೀಡಿದೆ. ಅಲ್ಲದೆ ಪಾದಯಾತ್ರೆಯ ಕೊನೆಯ ದಿನ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಬಿಜೆಪಿ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಅವರನ್ನು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ
.