ಮೈಸೂರು:ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿ ದ್ದಾರೆ. ಜತೆಗೆ, ನನ್ನ ಆತ್ಮಸಾಕ್ಷಿ ಸರಿಯಾಗಿದೆ. ಹೀಗಾಗಿ ಕಾನೂನಾತ್ಮಕ ಹೋರಾಟದಲ್ಲಿ ಗೆದ್ದೇ ಗೆಲ್ತೇನೆ ಎಂದು ಮುಡಾ ಪ್ರಕರಣದ ಪ್ರಸ್ತಾಪ ಮಾಡದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಅಶೋಕಪುರಂನಲ್ಲಿ ಭಾನುವಾರನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನನ್ನ ಆತ್ಮಸಾಕ್ಷಿ ಸರಿಯಾಗಿದೆ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೇನೆ. ಹೀಗಾಗಿ ನಾನು ಯಾವುದಕ್ಕೂ ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ ಎಂದರು. ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ. ಬಹಳ ಜನ ಬಂದು ಧೈರವಾಗಿರಿ, ರಾಜೀನಾಮೆ ಕೊಡಬೇಡಿ ಅಂತಾರೆ. ಆದರೆ, ನಾನು ಇಂಥ ದ್ದಕ್ಕೆಲ್ಲ ಹೆದರುವವನೇ ಅಲ್ಲ ಎಂದರು.
ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
RELATED ARTICLES