Top Newsಜಿಲ್ಲೆರಾಜ್ಯವೆಬ್ ಸ್ಟೋರೀಸ್ಸುದ್ದಿ

ಕ್ಯಾಂಟರ್ ಹರಿದು ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್​​ ಹರಿದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗನಹಳ್ಳಿ ಬಳಿ ನಡೆದಿದೆ.

ರಾಜೀವ್ ಗಾಂಧಿ ಬಡವಾಣೆಯ ಪ್ರದೀಪ್ (35) ಮೃತ ದುರ್ದೈವಿ. ಅಂದಹಾಗೆ ದ್ವಿಚಕ್ರ ವಾಹನ ಸವಾರ ಟಿ.ಬಿ ವೃತ್ತದಿಂದ ಪಾಲನಜೋಗಿಹಳ್ಳಿ ಕಡೆಗೆ ರಾಂಗ್ ರೂಟ್ ನಲ್ಲಿ ಹೋಗುತ್ತಿದ್ದಾಗ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಕಾರೊಂದು ವೇಗವಾಗಿ ಬಂದು ಕ್ಯಾಂಟರ್ ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕಾರಿಗೆ ಟಚ್ ಆಗಿ ಲಾರಿಯ ಚಕ್ರದ ಅಡಿಗೆ ದ್ವಿಚಕ್ರ ವಾಹನ ಸವಾರ ಬಿದ್ದಿದ್ದಾನೆ. ಬಿದ್ದ ಕೂಡಲೇ ಲಾರಿಯ ಚಕ್ರ ಬೈಕ್ ಸವಾರನ ತಲೆಯ ಮೇಲೆ ಹರಿದ ಪರಿಣಾಮ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಮೆದುಳು ಬಿದ್ದಿದೆ.

ದೊಡ್ಡಬಳ್ಳಾಪುರ ಶವಾಗರಕ್ಕೆ ಮೃತ ದೇಹ ರವಾನೆ ಮಾಡಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕ್ಯಾಂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button