ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ನಡೆದಿದೆ.
ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.ವೆಂಕಟೇಶ್(55), ವೆಂಕಟೇಶ್(57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಿಶೋರ್ ಎಂಬವರಿಗೆ ಗಾಯವಾಗಿದೆ. ಗಾಯಾಳು ಕಿಶೋರ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಚಾಲಕನ ನಿದ್ರೆ ಮಂಪರಿನಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.