Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ವಿಜಯಪುರ : ಮರಕ್ಕೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಯಲ್ಲಿ ಈ ಘಟನೆ ನಡೆದಿದ್ದು. ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ.ಇನ್ನು ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಮೂವರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments (0)

Your email address will not be published. Required fields are marked *

Back to top button