ಹಾನಸ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್ ಬಳಿ ಪ್ರಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪಾಣಾಪಾಯದಿಂದ ಪಾರಾಗಿದ್ದಾರೆ..
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದೆ ಕಾರಣ 80 ಅಡಿ ಆಳಕ್ಕೆ ಬಿದ್ದಿದೆ.
ಗೋವಿಂದ್ ಅವರು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ನಿವಾಸಿಗಳಾಗಿದ್ದು, ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ರು. ಕಾರ್ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮಳೆಗಾಲ ಮತ್ತು ಚಳಿಗಾಲ ಸಂದರ್ಭದಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆ ಇರುತ್ತದೆ. ದಟ್ಟ ಮಂಜಿನಿಂದ ರಸ್ತೆ ಕಾಣದೇ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿರುತ್ತವೆ.


