ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿಯ ತಾಂಡಾ ಬಳಿ ಘಟನೆ ನಡೆದಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತೆಲಂಗಾಣ ಮೂಲದ ರಾಚಪ್ಪ, ನವೀನ್, ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ.
ನಿನ್ನೆ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಹೋಗಿದ್ರು. ಇಂದು ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುವ ವೇಳೆ ಕಾರಿಗೆ ಗೂಡ್ಸ್ ಗಾಡಿ ಡಿಕ್ಕಿ ಹೊಡೆದಿದೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..


