ಬೆಂಗಳೂರು: ಅವ್ಯವಹಾರ, ಅಕ್ರಮಗಳ ವಿರುದ್ಧ ಧ್ವನಿ ಎತ್ತಿದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೆ ದಾವೆ, ಬಂಧನ. ಸರ್ಕಾರದ ಇಂತಹ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.

ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಬೆದರಿಕೆ ತಂತ್ರಗಳಿಗೆ ಕಾರ್ಯಕರ್ತರು ಹೆದರದೇ ಹೋರಾಡುತ್ತಿದ್ದು, ವಿರೋಧ ಪಕ್ಷವಾಗಿ ಕಾಟಾಚಾರದ ಹೋರಾಟವನ್ನು ಮಾಡುತ್ತಿಲ್ಲವೆಂದು ಕಠಿಣ ಸಂದೇಶ ರವಾನಿಸಿದ್ದಾರೆ.

ದಿನಕ್ಕೊಂದು ಹಗರಣಗಳು ಹೊರಬರುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ, ಮೂಡ ನಿವೇಶನಗಳ ಹಂಚಿಕೆ ಆಕ್ರಮದ ವಿರುದ್ಧ ಮೈಸೂರು ಚಲೋ ಪಾದಯಾತ್ರೆಯಿಂದ ಸಿಎಂ ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಆಡಳಿತವೇ ಕುಸಿದು ಬಿದ್ದದೆ. ಅನುಭವಿ ಮುಖ್ಯಮಂತ್ರಿಗಳು, ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ ಸಿದ್ದರಾಮಯ್ಯನವರೇ, ನಮ್ಮ ಹೋರಾಟಕ್ಕೆ ಮಣಿದು ವಾಲ್ಮೀಕಿ ಹಗರಣದಲ್ಲಿ 87 ಕೋಟಿ ಆವ್ಯವಹಾರ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಮೈಸೂರಿನ ಮುಡಾ ಹಗರಣದ ಸಂಬಂಧ ಹೈಕೋರ್ಟಿನಲ್ಲಿ ವಾದ ಪ್ರತಿವಾದ ನಡೆದಿದ್ದು, ತಾರ್ಕಿಕ ಆಂತ್ಯಕ್ಕೆ ಬಂದಿದೆ. ಅತ್ಯಂತಕ ಕಡಿಮೆ ಅವಧಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಯುವಕರು ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸಿ ದೊಡ್ಡ ಯಶಸ್ವಿ ತಂದುಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟರು.

By Veeresh

Leave a Reply

Your email address will not be published. Required fields are marked *

Verified by MonsterInsights