ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ನಡೆಯಲಿದೆ.
ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ ಟಾರ್ಗೆಟ್ ಅನ್ನು ಜಿಬಿಎ ಹೊಂದಿದ್ದು, ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲಿ ಸಮೀಕ್ಷೆ ಆರಂಭವಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ, 152- ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾತಿ ಸಮೀಕ್ಷೆ ನಡೆಸಲಾಯಿತು.
ಮಾನ್ಯ ಕಂದಾಯ ಸಚಿವರಾದ ಶ್ರೀ. ಕೃಷ್ಣಬೈರೇಗೌಡ ರವರ ಮನೆಗೆ ಕರ್ನಾಟಕ ರಾಜ್ಯ ಹಿಂದಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾನ್ಯ ಆಯುಕ್ತರು ಶ್ರೀ. ಪೋಮ್ಮಲ ಸುನಿಲ್ ಕುಮಾರ್ ರವರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ, ಸಹಾಯಕ ಕಂದಾಯ ಅಧಿಕಾರಿ ಹಾಗೂ ಮಾಸ್ಟರ್ ಟ್ರೈನರ್ಸ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.


