ಮಂಡ್ಯ: ಕಾಂಗ್ರೆಸ್ ಸರಕಾರ ರಾಜ್ಯದ ಮಹತ್ವದ ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸಿದ್ದು, ಮೇಕೆದಾಟು ಯೋಜನೆ ಪೂರ್ಣಗೊಳಿಸುವುದು ನಮಗೆ ದೊಡ್ಡ ವಿಷಯವಲ್ಲ, ಈಗಾಗಲೇ ಮೇಕೆದಾಟಿಗೆ ಡಿಪಿಆರ್ ಸಿದ್ದವಾಗಿದೆ. ರಾಜ್ಯದ ಕೇಂದ್ರ ಸಚಿವರು ಅನುಮತಿ ಕೊಡಿಸಿದರೆ ಶೀಘ್ರ ಯೋಜನೆ ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಯಂತ್ರದ ಗುಂಡಿ ಒತ್ತುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿ, ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ನಮಗಿಂತ ತಮಿಳುನಾಡಿಗೆ ಹೆಚ್ಚಿನ ಅನುಕೂಲ. ಆದರೂ ರಾಜಕೀಯಕ್ಕಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ಕೇಂದ್ರ ಮನಸ್ಸು ಮಾಡಿದರೆ ಈ ಯೋಜನೆ ಸಾಧ್ಯ. ಕೇಂದ್ರ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಂದ ಯೋಜನೆಗೆ ಅನುಮತಿ ಕೊಡಿಸುವ ಕೆಲಸ ಮಾಡಲಿ ಎಂದು ಮನವಿ ಮಾಡಿದರು. ಕೇವಲ ಐದನೇ ಹಂತ ಮಾತ್ರವಲ್ಲದೇ 6ನೇ ಹಂತ ಕೂಡ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಸಂಪೂರ್ಣ ಬೆಂಗಳೂರಿಗೆ ನೀರು ಪೂರೈಸುವುದು ನಮ್ಮ ಉದ್ದೇಶವಾಗಿದ್ದು, 6 ಆ ಹಂತಕ್ಕೆ ಸುಮಾರು 7,200 ಕೋಟಿ ಅನುದಾನದ ಅವಶ್ಯಕತೆ ಇದೆ. ಆ ಹಣಕಾಸಿನ ನೆರವು ಪಡೆದು ಯೋಜನೆ ಅನುಷ್ಠಾನ ಮಾಡಲಿದ್ದು, ಕಾಂಗ್ರೆಸ್ ಸರಕಾರ ಮೂಲ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತದೆ.
ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರು:ಸಿಎಂ ಸಿದ್ದರಾಮಯ್ಯ
RELATED ARTICLES