Top Newsರಾಜಕೀಯಸುದ್ದಿ

ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್ : ವಿಶೇಷ ಅನುದಾನದಲ್ಲಿ 50,571 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.

ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.04 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಬಾರಿಯ ಬಜೆಟ್​​ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆ 1.5 ಲಕ್ಷ ಕೊಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಬಜೆಟ್‌ನಲ್ಲಿ ರಾಜ್ಯಗಳಿಗೆ ಕೇಂದ್ರದ ‘ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು’ ಯೋಜನೆಗೆ ರೂ.1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದಾರೆ. ಬಂಡವಾಳ ವೆಚ್ಚ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿದೆ.

ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿನ ಬಂಡವಾಳ ಹೂಡಿಕೆ ಯೋಜನೆಗಳನ್ನುಈ ಯೋಜನೆಯಡಿ ಅನುಮೋದಿಸಲಾಗಿದೆ. ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗಳ ರಾಜ್ಯದ ಪಾಲನ್ನು ಪೂರೈಸಲು ಹಣವನ್ನು ಒದಗಿಸಲಾಗಿದೆ.

ಈ ಯೋಜನೆಯು ರಾಜ್ಯ ಸರ್ಕಾರದ ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ರದ್ದುಗೊಳಿಸಲು, ಹಳೆಯ ವಾಹನಗಳ ತೆರವು ಮತ್ತು ಸ್ವಯಂಚಾಲಿತ ವಾಹನ ಪರೀಕ್ಷಾ ಸೌಲಭ್ಯ ಸ್ಥಾಪನೆಗೆ ವ್ಯಕ್ತಿಗಳಿಗೆ ತೆರಿಗೆ ರಿಯಾಯಿತಿ ಒದಗಿಸಲು ರಾಜ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತದೆ. ಇದಲ್ಲದೆ, ನಗರ ಯೋಜನೆ ಮತ್ತು ನಗರ ಹಣಕಾಸು ಕ್ಷೇತ್ರದಲ್ಲಿ ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುತ್ತಿದೆ.

Comments (0)

Your email address will not be published. Required fields are marked *

Back to top button