ಬೆಂಗಳೂರು : ಚಿತ್ರದುರ್ಗ ನಗರದ ತರಾಸು ರಂಗ ಮಂದಿರದಲ್ಲಿ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮಾದಿಗ ಮಹಾ ಸಭಾದ ಮುಖಂಡರು ಗಲಾಟೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ಚಿತ್ರದುರ್ಗದಲ್ಲಿ ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಸುದ್ದಿಗೊಷ್ಠಿ ಮಾಡುವಾಗ ಕಾಂಗ್ರೆಸ್ ಗೂಂಡಾಗಳು, ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಅವರ ಸುದ್ದಿಗೊಷ್ಠಿಗೆ ತೊಂದರೆ ಮಾಡಿದ್ದನ್ನು ನೋಡಿದ್ದೇನೆ. ಕಾಂಗ್ರೆಸ್ ನ ಈ ಗೂಂಡಾಗಿರಿಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದಲಿತರಿಗೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದೆ ವಿಚಾರ ತೆಗೆದುಕೊಂಡು ನಾನು, ಗೋವಿಂದ ಕಾರಜೋಳ, ರಾಜೀವ್ ಅವರು ರಾಜ್ಯಾದ್ಯಂತ ಆಂದೋಲನ ಶುರು ಮಾಡುತ್ತಿದ್ದೇವೆ. ನಮ್ಮ ಸಮುದಾಯದ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಈ ವಿಚಾರಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದರು.
ಸಿದ್ದರಾಮಯ್ಯ ಎಲ್ಲದಕ್ಕೂ ಹಾರಿಕೆ ಉತ್ತರ ನೀಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಅಂದ್ರೆ- ಇಲ್ಲ ಸಲ್ಲದ ಭರವಸೆ ನೀಡಿ ದಲಿತರಿಗೆ ಮೋಸ ಮಾಡಿದ್ದಾರೆ. ಇದೆ ರೀತಿಯ ಗೂಂಡಾಗಿರಿ ಮುಂದುವರಿದ ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.