ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ ಆಗಮಿಸಿ, ತಮ್ಮ ಫಾರಂ ಹೌಸ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ದರ್ಶನ್ ಕಳೆದ ಜೂ.11ರಂದು ಮೈಸೂರಿನಲ್ಲೇ ಬಂಧನವಾಗಿದ್ದರು. ಜಾಮೀನು ಸಿಕ್ಕರೂ ಬೆಂಗಳೂರು ಬಿಟ್ಟು ತೆರಳದಂತೆ ನ್ಯಾಯಾಲಯವು ಆದೇಶಿಸಿತ್ತು. ಮೈಸೂರಿಗೆ ತೆರಳಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿ ಪುರಸ್ಕರಿಸಿದ್ದ ಬೆಂಗಳೂರಿನ ಸಿಸಿಎಚ್ 57ನೇ ಸೆಷನ್ಸ್ ನ್ಯಾಯಾಲಯವು ಶುಕ್ರವಾರದಿಂದ ಜ.5ರವರೆಗೆ ಮೈಸೂರಿಗೆ ತೆರಳಲು ಅವಕಾಶ ನೀಡಿತ್ತು. ಈ ಹಿನ್ನೆಲೆ ಶುಕ್ರವಾರ ಮೈಸೂರು- ಟಿ. ನರಸೀಪುರ ಮುಖ್ಯ ರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರಂ ಹೌಸ್‌ಗೆ ಅಕ್ಕನ ಮಗ ಚಂದನ್ ಅವರೊಂದಿಗೆ ಆಗಮಿಸಿದರು. ದರ್ಶನ್ ಅವರೊಂದಿಗೆ ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವಿರ್, ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಜೊತೆಗಿದ್ದಾರೆ. ಮೈಸೂರಿಗೆ ಆಗಮಿಸಿರುವ ದರ್ಶನ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Verified by MonsterInsights