ಚಾಮರಾಜನಗರ ; ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಇಂದು ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
ನಾಸಿರ್ ಹುಸೇನ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ನೂತನ ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಥಳಿಸಿ ಬೆಂಕಿ ಹಚ್ಚಲು ಮುಂದಾದ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಭಾವಚಿತ್ರಗಳನ್ನು ವಶಕ್ಕೆ ಪಡೆಯಲು ಮುಂದಾದರು.
ಪೊಲೀಸರ ಮಧ್ಯೆ ಪ್ರವೇಶಕ್ಕೆ ಗರಂ ಆದ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು. ಈ ವೇಳೆ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಗುತ್ತಿದ್ದಂತೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ, ದೊಡ್ಡ ಹೈಡ್ರಾಮವೇ ನಡೆದು ಪೊಲೀಸ್ ವಾಹನ ಮುಂದೆ ಬಿಜೆಪಿ ಮುಖಂಡರು ಮಲಗಿ ಕಿಡಿಕಾರಿದರು. ಬಿಜೆಪಿ ಪ್ರತಿಭಟನೆ ನಡೆಸಿ ರಸ್ತೆ ತಡೆದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.