Friday, August 22, 2025
24.2 C
Bengaluru
Google search engine
LIVE
ಮನೆಮನರಂಜನೆಹೊಸವರ್ಷಕ್ಕೆ "WHAT TO DO MAMA" ಎನ್ನುತ್ತಿದ್ದಾರೆ ಚಂದನ್​ ಶೆಟ್ಟಿ

ಹೊಸವರ್ಷಕ್ಕೆ “WHAT TO DO MAMA” ಎನ್ನುತ್ತಿದ್ದಾರೆ ಚಂದನ್​ ಶೆಟ್ಟಿ

ಬಿಗ್​ ಬಾಸ್​ ವಿನ್ನರ್​, ಖ್ಯಾತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅದ್ಧೂರಿ ಟಪಂಗುಚಿ ಸಾಂಗ್​ ಗೆ ಖ್ಯಾತ ಹಿರಿಯ ನಟ ರಂಗಾಯಣ ರಘು ಹಾಗೂ ‘ಗಿಚ್ಚಿ ಗಿಲಿಗಿಲಿ’ಯ ಕಲಾವಿದರ ಜೊತೆ ಹೆಜ್ಜೆ ಹಾಕಿದ್ದಾರೆ.

ಪ್ರತಿವರ್ಷ ಡೆಸೆಂಬರ್​​ ತಿಂಗಳ ಕೊನೆಯಲ್ಲಿ ಚಂದನ್​ ಶೆಟ್ಟಿ ಒಂದಲ್ಲಾ ಒಂದು ಸುಪ್ರಸಿದ್ದ ಹಾಡನ್ನು ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ. ಕರ್ನಾಟಕಕದ ಜನಪ್ರಿಯ rapper ಚಂದನ್​ ಶೆಟ್ಟಿ ಅಪಾರ ಅಭಿಮಾನಿ ಸಮೂಹವನ್ನು ಹೊಂದಿದ್ದಾರೆ. ಡಿಸೆಂಬರ್​ ತಿಂಗಳಲೇ ಬಿಡುಗಡೆಯಾಗುವ ಚಂದನ್​ ಶೆಟ್ಟಿ ಅವರ ಹಾಡಿಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ಕೂಡ ಚಂದನ್ ಶೆಟ್ಟಿ, WHAT TO DO MAMA? ಎಂಬ ಅಪ್ಪಟ್ಟ ದೇಸಿ ಶೈಲಿಯ ಟಪಂಗುಚಿ ಹಾಡನ್ನು ತಮ್ಮದೇ ಆದ ಯೂಟ್ಯೂಬ್ ಚಾನಲ್ ನಲ್ಲಿ ಈ ವರ್ಷದ ಕೊನೆಗೆ ಬಿಡುಗಡೆ ಮಾಡಿದ್ದಾರೆ.

ಇಷ್ಟು ದಿನ ಚಂದನ್ ಶೆಟ್ಟಿ ಅವರ ಸುಪ್ರಸಿದ್ದ RAP ಸಾಂಗ್ಸ್ ಗಳನ್ನು ಬೇರೆ ಬೇರೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಚಂದನ್ ಶೆಟ್ಟಿ ಅವರೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ವಿಜಯ್ ಈಶ್ವರ್ ಅವರ ಜೊತೆಗೂಡಿ ಹಾಡನ್ನು ಬರೆದಿದ್ದು, ರಿಯಾಲಿಟಿ ಶೋ ನಲ್ಲಿ ಜನಪ್ರಿಯರಾಗಿರುವ ಮುರುಗ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಉದಯಲೀಲ ಛಾಯಾಗ್ರಹಣ, ಸತೀಶ್ ಚಂದ್ರ ಸಂಕಲನ ಹಾಗೂ ದಿವಾಕರ್ ಅವರ ಕಲಾ ನಿರ್ದೇಶನದ ಮೂಲಕ ಈ ಹಾಡು ಮೂಡಿ ಬಂದಿದೆ.

ಈ ಹಾಡು ಹದಿಹರೆಯದ ಹುಡುಗರಿಗೆ ಹೇಳಿ ಮಾಡಿಸಿದ ಹಾಡಾಗಿದೆ. ಹುಡುಗರ “ಪ್ರಾಬ್ಲಮ್”ಗಳನ್ನು ಹಾಡಿನ ಮೂಲಕ ಬಿಂಬಿಸುತ್ತದೆ. “ಪ್ರಾಬ್ಲಮ್ ಪ್ರಾಬ್ಲಮ್ ಪ್ರಾಬ್ಲಮ್ ವಾಟ್ ಟು ಡು ಮಾಮ?” ಎಂದೇ ಹಾಡು ಆರಂಭವಾಗುತ್ತದೆ. ಇಷ್ಟು ದಿನ ಬಿಡುಗಡೆಯಾಗಿರುವ ಚಂದನ್ ಶೆಟ್ಟಿ ಅವರ RAP ಸಾಂಗ್ಸ್ ಹೆಚ್ಚಾಗಿ ಪಬ್ ಗಳ ಮೇಲೆ ಕೇಂದ್ರಿಕೃತವಾಗಿತ್ತಿತ್ತು..ಆದರೆ ಈ ಹಾಡು ಪಕ್ಕಾ ಲೋಕಲ್ ಸ್ಟೈಲ್ ನಲ್ಲಿ ಮೂಡಿಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಬಾರ್ ಸೆಟ್ ಹಾಕಿ ಈ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಚಂದನ್ ಶೆಟ್ಟಿ ಈ ಹಾಡಿನಲ್ಲಿ ಪಕ್ಕಾ ಲೋಕಲ್ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಟ ರಂಗಾಯಣ ರಘು ಅವರು ಚಂದನ್ ಶೆಟ್ಟಿ ಅವರ ಸೋದರಮಾವನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ರಿಯಾಲಿಟಿ ಶೋ “ಗಿಚ್ಚಿ ಗಿಲಿಗಿಲಿ”ಯ ಕಲಾವಿದರಾದ ರಾಘವೇಂದ್ರ, ಆರ್ ಜೆ ವಿಕ್ಕಿ, ಹುಲಿ ಕಾರ್ತಿಕ್, ನಿತಿನ್ ಅಮಿನ್, ಶಿಡ್ ಶ್ಯಾಡೋ ಶಿವ, ಎನ್ ಸಿ ಅಯ್ಯಪ್ಪ ಮುಂತಾದವರು ಈ ಅದ್ದೂರಿ RAP ಸಾಂಗ್ ನಲ್ಲಿ ನಟಿಸಿದ್ದಾರೆ.

ಚಂದನ್ ಶೆಟ್ಟಿ ಅವರೆ ಸಂಗೀತ ಸಂಯೋಜಿಸಿ, ಹಾಡಿ ಹಾಗೂ ನಿರ್ದೇಶನವನ್ನೂ ಮಾಡಿರುವ ಈ ಹಾಡು ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಮತ್ತು ಹೊಸವರ್ಷದ ಆಗಮನದ ಸಮಯದಲ್ಲಿ ಬಿಡುಗಡೆಯಾಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗುವುದಂತೂ ಖಂಡಿತ..

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments