Friday, August 29, 2025
27.2 C
Bengaluru
Google search engine
LIVE
ಮನೆಸುದ್ದಿಘನತ್ಯಾಜ್ಯ ಸಂಗ್ರಹಣೆಯ ಆಟೋ, ಟಿಪ್ಪರ್ ವಾಹನಗಳ ಸಮಯ ಬದಲಾವಣೆ

ಘನತ್ಯಾಜ್ಯ ಸಂಗ್ರಹಣೆಯ ಆಟೋ, ಟಿಪ್ಪರ್ ವಾಹನಗಳ ಸಮಯ ಬದಲಾವಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5.30 ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ.

ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಪರಿಷ್ಕರಿಸಲಾಗಿದೆ.

ಈ ಹಿಂದೆ ಬೆಳಿಗ್ಗೆ 6.00 ರಿಂದ 7.30 ಸಮಯವನ್ನು ಜಾರಿಯಲ್ಲಿತ್ತು. ಅದನ್ನು ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಬದಲಾವಣೆಯ ಮೂಲಕ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗುವುದರ ಜೊತೆಗೆ, ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಮತ್ತು ಬ್ಲಾಕ್ ಸ್ಪಾಟ್ (Black Spot) ಗಳು ರೂಪುಗೊಳ್ಳುವುದನ್ನು ತಡೆಗಟ್ಟಲು ಅನುಕೂಲವಾಗಲಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments