Wednesday, April 30, 2025
24 C
Bengaluru
LIVE
ಮನೆ#Exclusive NewsTop Newsಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ವರಿಷ್ಠರ ಜೊತೆ ಚರ್ಚೆ ಬಳಿಕ ಅಭ್ಯರ್ಥಿ ತೀರ್ಮಾನ ಕುಮಾರಸ್ವಾಮಿ

ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ವರಿಷ್ಠರ ಜೊತೆ ಚರ್ಚೆ ಬಳಿಕ ಅಭ್ಯರ್ಥಿ ತೀರ್ಮಾನ ಕುಮಾರಸ್ವಾಮಿ

ರಾಮನಗರ: ಇನ್ನೊಂದು ವಾರದಲ್ಲಿ ಬೈಎಲೆಕ್ಷನ್​ ದಿನಾಂಕ ಘೋಷಣೆ ಆಗುತ್ತೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ಚನ್ನಪಟ್ಟಣ ಬೈಎಲೆಕ್ಷನ್​ ಯಾವಾಗ ಎಂಬ ಪ್ರಶ್ನೆಗೆ ಸುಳಿವು ಕೊಟ್ಟಿದ್ದಾರೆ. ಜಿಲ್ಲೆಯ ಉಪಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್​ ಸಭೆಯಲ್ಲಿ​ ಮಾತನಾಡಿದ ಅವರು, ಕಾರ್ಯಕರ್ತರು, ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳಬೇಕು. ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಬಿಜೆಪಿ ವರಿಷ್ಠರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಯಾರಾಗಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾವು ಕಳೆದ ಎರಡು ಚುನಾವಣೆಯನ್ನ ನಿರಂತರವಾಗಿ ಈ ಕ್ಷೇತ್ರದಿಂದ ಗೆದ್ದಿದ್ದೇವೆ. ಈ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸಕ್ಕೆ ನಾವು ತೆಗೆದುಕೊಳ್ಳದೇ ನಾನು ಯಾವುದೇ ನಿರ್ಣಯ ಮಾಡುವುದಿಲ್ಲ. 2013ರಲ್ಲೂ ಕೇವಲ 3 ಸಾವಿರ ಮತಗಳಲ್ಲಿ ಸೋತಿದ್ದೇವೆ. 2018, 23ರಲ್ಲಿ ನಾವು ನಿರಂತರವಾಗಿ ಗೆದ್ದಿದ್ದೇವೆ. ಮೊದಲಿನಿಂದಲೂ ಇದು ಜನತಾದಳದ ಭದ್ರಕೋಟೆ ಎಂದು ಕರೆದಿದ್ದಾರೆ.

ನಮ್ಮಲ್ಲಿನ ಕೆಲವೊಂದಷ್ಟು ತಿಕ್ಕಾಟಕ್ಕೆ ಸ್ವಲ್ಪ ವೀಕ್ ಆಗಿದೆ. ಈಗ ಕಾರ್ಯಕರ್ತರು ಬಲಾಡ್ಯವಾಗಿ ಸಂಘಟನೆ ಮಾಡುತ್ತಿದ್ದಾರೆ. ಅದರಿಂದ ಅವರ ವಿಶ್ವಾಸ ಇಲ್ಲದೇ ಏನು ತೀರ್ಮಾನ ಮಾಡಲ್ಲ. ಅವರ ಪಕ್ಷದಲ್ಲಿ ಅವರು ಏನೇ ಚರ್ಚೆ ಮಾಡಿಕೊಂಡರೂ ಅದು ಅವರ ಸಂಘಟನೆ ವಿಚಾರ. ಅದನ್ನ ತಪ್ಪು ಅಂತ ನಾವು ಹೇಳಲ್ಲ ಎಂದರು.

ಕೋವಿಡ್ ಹಗರಣ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಈ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರುಗಳು ವಿರೋಧ ಪಕ್ಷದಲ್ಲಿ ಕೆಲಸ ಮಾಡುವಾಗ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದರು. ಪಿಎಸಿಎಲ್ ಚೇರ್ಮನ್ ಅವರ ಪಕ್ಷದವರೇ ಇದ್ದಾರೆ. ಇಲ್ಲಿಯವರೆಗೆ ಯಾವುದೇ ರೀತಿಯ ತನಿಖೆ ಮಾಡಿಲ್ಲ. ಈಗ ಏಕೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ನಿಮಗೆ ನಿಜಕ್ಕೂ ರಾಜ್ಯದ ತೆರಿಗೆ ಹಣ ಲೂಟಿ ಬಗ್ಗೆ ಮಾಹಿತಿ ಇದ್ದರೆ ಯಾವಾಗಲೋ ತನಿಖೆ ಆಗಬೇಕಿತ್ತು. ಈಗ ನಿಮ್ಮ ಪರಿಸ್ಥಿತಿಗಳ ರಕ್ಷಣೆ ಪಡೆಯಲು ಈ ರೀತಿಯ ಬೆಳವಣಿಗೆ ಪ್ರಾರಂಭ ಮಾಡಿದ್ದೀರಿ. ಇದು ಯಾವುದೇ ರೀತಿಯಲ್ಲಿ ಫಲ ನೀಡಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ವಿಚಾರವಾಗಿ ಮಾತನಾಡಿದ್ದು, ಇದು ಸೇಡಿನ ರಾಜಕಾರಣ ಅಲ್ಲದೇ ಮತ್ತೇನು? ಪಾಪ ಪದೇ ಪದೇ ಕುಮಾರಸ್ವಾಮಿ ಮೇಲೆ ಎಫ್ಐಆರ್ ಇಲ್ವಾ ಅಂತಾರೆ. ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಟ್ಟಿಲ್ಲ ಅಂತ ಕೇಳುತ್ತಾರೆ. ಕುಮಾರಸ್ವಾಮಿ ಮೇಲಿನ ಎಫ್ಐಆರ್​ಗೆ ಬೇಲ್ ಪಡೆದಿದ್ದೇನೆ. ನಾನು ನನ್ನ ಮೇಲೆ ತನಿಖೆ ಮಾಡಬೇಡಿ ಅಂತ ಹೇಳಿದ್ದೀನಾ? ತನಿಖೆ ಮಾಡಲು ಎಷ್ಟು ವರ್ಷ ಬೇಕು. 12 ವರ್ಷಗಳಿಂದ ತನಿಖೆ ಮಾಡಬೇಕಾ ಎಂದು ಕಿಡಿಕಾರಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments