ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ ವಿಮಾನಯಾನ ಸೇವೆ ಒದಗಲಿಸಲಿದೆ. ಶಿವಮೊಗ್ಗ ಚೆನ್ನೈ ವಿಮಾನ ಸೇವೆ ಬಗ್ಗೆ ಸಂಸದ ರಾಘವೇಂದ್ರ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಚೆನ್ನೈ ವಿಮಾನ ಸೇವೆಯು ಮಲೆನಾಡು ಪ್ರದೇಶದಲ್ಲಿ ಉದ್ಯಮ ಮತ್ತು ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸುವ ನಿರೀಕ್ಷೆಯಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.
ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ.
ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದ್ರಾಬಾದ್ ಸೇರಿದಂತ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ.
ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ… pic.twitter.com/1xrZsAhkzU
— B Y Raghavendra (@BYRBJP) July 14, 2024
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com