Thursday, May 1, 2025
30.3 C
Bengaluru
LIVE
ಮನೆ#Exclusive Newsಚಿಕ್ಕಬಳ್ಳಾಪುರ ; ರಾತ್ರಿ ವೇಳೆ JDS ಮುಖಂಡನನ್ನು ಲಾಂಗ್​ನಿಂದ ಕೊಚ್ಚಿ ಬರ್ಬರ ಕೊಲೆ......!

ಚಿಕ್ಕಬಳ್ಳಾಪುರ ; ರಾತ್ರಿ ವೇಳೆ JDS ಮುಖಂಡನನ್ನು ಲಾಂಗ್​ನಿಂದ ಕೊಚ್ಚಿ ಬರ್ಬರ ಕೊಲೆ……!

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರದ  ತಮ್ಮನಾಯಕನಹಳ್ಳಿ ಗೇಟ್​ ಬಳಿ ಲಾಂಗ್​ನಿಂದ ಕೊಚ್ಚಿ ಜೆಡಿಎಸ್  ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದರು.  ವೇಳೆ ಸಂಚು ರೂಪಿಸಿ, ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್‌ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಲಾಗಿದೆ.

ಎಡಗೈ ತೋಳಿನ ಭಾಗ ಕಟ್ ಆಗಿ, ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹತ್ಯೆಯಾದವರ ಮಗ ಪೊಲೀಸರ ಬಳಿ, ತಮ್ಮ ತಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಬಳಿ ಕೆಲವು ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments