ಬೀಜಿಂಗ್ : ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಸೇರಿದಂತೆ ಚೀನಾದಲ್ಲಿ ಕೆಲವು ಹೊಸ ವೈರಸ್ ಸೃಷ್ಟಿಯಾಗಿದ್ದು, ಇದು ಕೂಡ ಕೊರೊನಾ ವೈರಸ್ನಂತೆ ಸಾಂಕ್ರಾಮಿಕವಾಗಿ ಹರಡುವುದರಿಂದ ಮತ್ತೊಮ್ಮೆ ಹೆಲ್ತ್ ಎಮರ್ಜೆನ್ಸಿ ಸೃಷ್ಟಿಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಚೀನಾದಲ್ಲಿ ರೋಗಿಗಳಿಂದ ಆಸ್ಪತ್ರೆಗಳೆಲ್ಲಾ ತುಂಬಿವೆ ಎಂಬ ಪೋಸ್ಟ್ ಒಂದು ಹರಿದಾಡುತ್ತಿದೆ. ಆದರೆ, ಈ ಪೋಸ್ಟ್ಗಳಿಗೆ ಯಾವುದೇ ಆಧಾರವಿಲ್ಲ. ಈ ಹೊಸ ವೈರಸ್ ಬಗ್ಗೆ ಚೀನಾ ಯಾವುದೇ ಸ್ಪಷ್ಟನೆ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೂ ಈ ಬಗ್ಗೆ ಏನನ್ನೂ ಹೇಳಿಲ್ಲ.
HMPV ವೈರಸ್ ಎಂದರೇನು?
ಈ ವೈರಸ್ ದೇಹ ಹೊಕ್ಕಿದ ಮೇಲೆ ಉಸಿರಾಟಕ್ಕೆ ತೊಂದರೆಯನ್ನುಂಟು ಮಾಡ್ತದೆ. ಕೆಮ್ಮು ಮತ್ತು ಸೀನುವಿಕೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ವೇಗವಾಗಿ ಹರಡುತ್ತದೆ. ಇದರ ಪ್ರೌಢಾವಸ್ಥೆಯ ಅವಧಿ ಮೂರರಿಂದ ಐದು ದಿನಗಳು. ಈ ವೈರಸ್ ಮಕ್ಕಳು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರೋರ ಮೇಲೆ ಆಕ್ರಮಣ ಮಾಡುತ್ತದೆ.
ಲಕ್ಷಣಗಳು ಏನು..?
ಕೆಮ್ಮು, ಜ್ವರ, ಮೂಗು ಕಟ್ಟುವುದು, ಶೀತ ಈ ವೈರಸ್‌ನ ಸಾಮಾನ್ಯ ಲಕ್ಷಣಗಳಾಗಿವೆ. HMPV ವೈರಸ್ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಆಗಾಗ್ಗೆ ಕೈ ತೊಳೆಯುವುದಾಗಿದೆ. ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದೆ.