ಬೆಂಗಳೂರು: ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಐಡಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ.. ತನಿಖೆ ಮುಗಿಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿಯಲ್ಲಿದೆ.
2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದ್ದು, ಹನ್ನೊಂದು ಜನರ ಸಾವಿಗೆ ನೇರ ಹೊಣೆ RCB. ತನಿಖೆ ವೇಳೆ RCB, DNA, KSCA ವಿರುದ್ಧ ಹಲವು ಸಾಕ್ಷ್ಯಗಳು ಪತ್ತೆಯಾಗಿದೆ ಎನ್ನಲಾಗಿದೆ. ಆರ್‌ಸಿಬಿ ಜೊತೆ ಕೆಎಸ್‌ಸಿಎ, ಡಿಎನ್‌ಎ ನೇರ ಹೊಣೆ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಚಾರ್ಜ್‌ಶೀಟ್‌ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ.
ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಠರಾವೋ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆ ವೇಳೆ ಪತ್ತೆಯಾಗಿದೆ.ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಿಸಲಾಗಿದ್ದು, RCB ಜೊತೆ KSCA, DNA ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ.
ಟಿಕೆಟ್ ಬಗ್ಗೆ ಆರ್‌ಸಿಬಿ ಗೊಂದಲ ಹುಟ್ಟಿಸಿದ್ದೇ, ಘಟನೆಗೆ ಮೊದಲ ಕಾರಣ. ಅಲ್ಲದೇ ಡಿಎನ್‌ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ. ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ ದಾಖಲಿಸಲಾಗಿದೆ. ಪ್ರತಿ ಗೇಟ್‌ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಯನ್ನು ಸಹ ತನಿಖಾ ತಂಡ ದಾಖಲಿಸಿದೆ.


