ಚಿತ್ರದುರ್ಗ : ನಗರದ VS ಸಾಗರ IB ಯಲ್ಲಿ ಜೂಜಾಟ (ಇಸ್ಪೀಟ್) ಆಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ ನಡೆಸಲಾಯಿತು.
ನಹರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದರು. ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೂಜಾಟ ಆಡಿದ ನಗರಸಭೆ ಸದಸ್ಯರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕುಮ್ಮಕ್ಕಿಗೆ ಖಂಡನೆ. ನಗರಸಭೆ ಸದಸ್ಯರ ವಿರುದ್ದ ರೌಡಿಶೀಟರ್ ಕೇಸ್ ದಾಖಲಿಸುವಂತೆ ಒತ್ತಾಯಿಸಿ, ಚಿತ್ರದುರ್ಗ ಜಿಲ್ಲಾಡಳಿತಕ್ಕೆ ಪ್ರತಿಭಟನಕಾರರು ಮನವಿ ಸಲ್ಲಿಸಿದ್ದಾರೆ.