ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಲಿಂಗಪ್ಪ (25), ಸಿಂಧುಶ್ರೀ (2), ಅಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಮೃತ ದುರ್ದೈವಿಗಳು.
ಮೃತರು ರಾಯಚೂರು ಜಿಲ್ಲೆಯ ದಂಡಮ್ಮನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.