ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಆಚರಣೆ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಬಡಾಮಖಾನ್ ಬಳಿಯಿಂದ ಈದ್ ಮಿಲಾದ್ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ನಡೆದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಘೋಷಣೆ ಹಾಕುತ್ತಿದ್ದ ಯುವಕರನ್ನು ಕೂಡಲೇ ವಶಕ್ಕೆ ಪಡೆದ ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.