New delhi

ದೆಹಲಿಯಲ್ಲಿ CJP ಪ್ರತಿಭಟನೆ – ಮೆಟ್ರೋ, ಇಂಟರ್​ನೆಟ್ ಸೇವೆ ಬಂದ್!

CJP protest in Delhi – Metro and internet services suspended!

ದೆಹಲಿ : SIR ವಿರೋಧಿಸಿ CJP ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನವದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಪ್ರತಿಭಟನೆ ನಡೆಯುತ್ತಿದೆ. ಯಾವುದೇ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಲು ಸಿಜೆಪಿ ಸಜ್ಜಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿಯಾದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ತಪ್ಪಿಸಲು ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರು ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಜರಗಿಸಿದ್ದು, ನಗರದಾದ್ಯಂತ ಸರ್ಪಗಾವಲು ಹಾಕಲಾಗಿದೆ.

ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲು ಸಿಜೆಪಿ ಮುಂದಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಪ್ರತಿಭಟನಾಕಾರರು, ಸಾರ್ವಜನಿಕರು ಹಾಗೂ ಪೊಲೀಸರ ಸುರಕ್ಷತೆಗಾಗಿ ಈ ಕ್ರಮ ಅನಿವಾರ್ಯವಾಗಿದೆ. ಕಳೆದ ಜುಲೈನಲ್ಲಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ಹಾಗೂ ಕಲ್ಲುತೂರಾಟ ನಡೆದು ನೂರಾರು ಪೊಲೀಸರು ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರಿಂದ ಬಿಗಿ ಕಾವಲು ಮುಂದುವರಿದಿದ್ದು, ದೆಹಲಿ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ತಡೆದು ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಸ್ತೆಯುದ್ದಕ್ಕೂ ಸಾಲು ಸಾಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಬ್ಯಾರಿಕೇಡ್‌ಗಳಿಗೆ ವೆಲ್ಡಿಂಗ್ ಮಾಡುವ ಮೂಲಕ ಕಠಿಣ ಭದ್ರತೆ ಕಲ್ಪಿಸಲಾಗಿದೆ. ದೆಹಲಿಯಲ್ಲಿ ಸೆಕ್ಷನ್ 163 ಜಾರಿಗೊಳಿಸಲಾಗಿದೆ.

45ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳು ಬಂದ್

ಭದ್ರತೆಯ ದೃಷ್ಟಿಯಿಂದ ದೆಹಲಿಯ ಪ್ರಮುಖ 45 ಮೆಟ್ರೋ ನಿಲ್ದಾಣಗಳನ್ನು ಸಂಜೆ 6ರವರೆಗೆ ಮುಚ್ಚಲಾಗಿದೆ. ಜನಪಥ್, ಪಟೇಲ್ ಚೌಕ್, ಕೇಂದ್ರ ಸಚಿವಾಲಯ (Central Secretariat), ಮಂಡಿ ಹೌಸ್, ಐಟಿಒ ಮತ್ತು ಕಾಶ್ಮೀರಿ ಗೇಟ್ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳ ಸಂಚಾರ ಹಾಗೂ ನಿರ್ಗಮನಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಮೆಟ್ರೋ ಮತ್ತು ರೈಲು ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ.

4 ಕಿ.ಮೀ ವ್ಯಾಪ್ತಿಯಲ್ಲಿ ಇಂಟರ್​ನೆಟ್ ಸೇವೆ ಬಂದ್

ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಂತರ್ ಮಂತರ್ ಸುತ್ತಮುತ್ತಲಿನ 4 ಕಿ.ಮೀ ವ್ಯಾಪ್ತಿಯಲ್ಲಿ ಇಂಟರ್​ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ತಾತ್ಕಾಲಿಕ ಅನುಮತಿಯೊಂದಿಗೆ ನಿನ್ನೆ ರಾತ್ರಿ 10 ಗಂಟೆಯಿಂದ ಇಂದಿನ ರಾತ್ರಿ 10 ಗಂಟೆಯವರೆಗೆ ಮೊಬೈಲ್ ಇಂಟರ್​ನೆಟ್​ನ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಜನಪಥ್ ಮತ್ತು ಕರ್ತವ್ಯ ಪಥ್ ಕ್ರಾಸಿಂಗ್ ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button
Verified by MonsterInsights