ಬೆಂಗಳೂರು: ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.. ಸಿಎಂ ಆಗಮಿಸಿದ ಕೂಡಲೇ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿಕೆ ಸುರೇಶ್ ಸಿಎಂ ಕಾಲಿಗೆ ಬಾಗಿ ನಮಸ್ಕರಿಸಿದರು.

ಸಿಎಂ ಅವರಿಗೆ ಇಷ್ಟವಾದ ನಾಟಿ ಕೋಳಿ ಖಾದ್ಯ, ಇಡ್ಲಿ, ವಡೆ, ಉಪ್ಪಿಟ್ಟು ಮಾಡಲಾಗಿದ್ದು, ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಾ ಉಭಯ ನಾಯಕರು ಮಾತುಕತೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಕಳೆದ ಶನಿವಾರ ಡಿ ಕೆ ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಆಹ್ವಾನಿಸಿದ್ದರು. ಈ ಮೂಲಕ ವಾರದೊಳಗೆ ಉಭಯ ನಾಯಕರ ಎರಡನೇ ಉಪಾಹಾರ ಮೀಟಿಂಗ್ ಇದಾಗಿದೆ.

ಸಿಎಂ ಆಗಮನದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಕಳೆದ ಶನಿವಾರ ಸಿಎಂ ಕಾವೇರಿ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜನೆ ಮಾಡಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ಸಿಎಂಗೆ ಡಿಸಿಎಂ ಬ್ರೇಕ್‌ಫಾಸ್ಟ್ ಆತಿಥ್ಯ ಇರಲಿದ್ದು, ಸಹಜವಾಗಿ ರಾಜಕೀಯ ಕುತೂಹಲ ಮೂಡಿಸಿದೆ.


