ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಡಿನ್ನರ್ ಸಭೆಗಳು, ಬಹಿರಂಗ ಹೇಳಿಕೆಗಳಿಂದ ರಾಜ್ಯ ಕಾಂಗ್ರೆಸ್ ಬಣ ರಾಜಕೀಯ ಸೃಷ್ಟಿಯಾಗಿದೆ. ಇದರಿಂದ ಪಕ್ಷಕ್ಕೆ ಹಿನ್ನಡೆ ಉಂಟಾಗಲಿದ್ದು, ರಾಜ್ಯ ಬಿಜೆಪಿಗೆ ಬಂದಿರುವ ಸ್ಥಿತಿ ಬರಲಿದೆ. ಹೀಗಾಗಿ ಎರಡೂ ಕಡೆಯ ನಾಯಕರು ಸೇರಿ ಒಟ್ಟಾಗಿ ಪಕ್ಷ ಸಂಘಟನೆ ಹಾಗೂ ಜ.21ರ ಬೆಳಗಾವಿ ಸಮಾವೇಶ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ಮಾಡಬೇಕು ಎಂದಿರುವುದಾಗಿ ಮೂಲಗಳು ತಿಳಿಸಿವೆ.