ರಾಜಕೀಯ
ಯಶವಂತಪುರ ಎಪಿಎಂಸಿಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!
CM D.K. Shivakumar makes a surprise visit to the Yeshwantpur APMC!

ಬೆಂಗಳೂರು : ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ, ಮಾರುಕಟ್ಟೆಯ ವಾಸ್ತವ ಪರಿಸ್ಥಿತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಈ ವೇಳೆ ಈರುಳ್ಳಿ ಮಂಡಿಯಲ್ಲಿ ಮೂಟೆ ಮೇಲೆ ಕುಳಿತು ರೈತರ ಬಳಿ ಮಾಹಿತಿ ಪಡೆದಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ರೈತರೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ ನಡೆಸಿದರು. ಪಂಚ ಗ್ಯಾರಂಟಿ ಯೋಜನೆಗಳು ನಿಮಗೆ ಸರಿಯಾಗಿ ತಲುಪುತ್ತಿವೆಯೇ? ‘ಗೃಹಲಕ್ಷ್ಮಿ’ ಯೋಜನೆಯ ಹಣ ನಿಮ್ಮ ಮನೆಗೆ ಬರ್ತಿದ್ಯಾ? ಎಂದು ನೇರವಾಗಿ ರೈತರನ್ನು ಹಾಗೂ ಅಲ್ಲಿನ ಮಹಿಳೆಯರನ್ನು ವಿಚಾರಿಸಿ, ಸೌಲಭ್ಯಗಳು ತಲುಪುತ್ತಿರುವ ಕುರಿತು ಖಚಿತಪಡಿಸಿಕೊಂಡರು.
ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು. “ಮಕ್ಕಳನ್ನು ಕೆಲಸಕ್ಕೆ ಇಟ್ಕೊಂಡಿದ್ರೆ ಅರೆಸ್ಟ್ ಮಾಡಿ, ಇಲ್ಲಂದ್ರೆ ನಿಮ್ಮನ್ನೇ ಸಸ್ಪೆಂಡ್ ಮಾಡ್ತೀನಿ” ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.




