Top Newsರಾಜಕೀಯವಾಣಿಜ್ಯಹಣಕಾಸು

ಬೆಂಗಳೂರಿಗೆ ಸಿಎಂ ಬಂಪರ್ ಗಿಫ್ಟ್: ಅನುದಾನ 7,000 ಕೋಟಿಗೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ನಲ್ಲಿ ಐತಿಹಾಸಿಕ ಘೋಷಣೆಗಳನ್ನು ಮಾಡಿದ್ದಾರೆ. ಆಡಳಿತಾತ್ಮಕ ಸುಲಭತೆಗಾಗಿ ಈಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ಐದು ಪ್ರತ್ಯೇಕ ಪಾಲಿಕೆಗಳಾಗಿ ವಿಂಗಡಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬೆಂಗಳೂರಿನ ಆಡಳಿತ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ.

ನಗರದ ಮೂಲಸೌಕರ್ಯಕ್ಕೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಳೆದ ವರ್ಷದ 3,000 ಕೋಟಿ ರೂ. ಅನುದಾನವನ್ನು ಈ ಬಾರಿ ಬರೋಬ್ಬರಿ 7,000 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಸಂಚಾರ ದಟ್ಟಣೆ ನಿವಾರಣೆಗಾಗಿ 3,000 ಕೋಟಿ ರೂ. ವೆಚ್ಚದಲ್ಲಿ 450 ಕಿ.ಮೀ ಉದ್ದದ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರೊಂದಿಗೆ ನಗರದ ಸೌಂದರ್ಯ ಹೆಚ್ಚಿಸಲು 175 ಪ್ರಮುಖ ಜಂಕ್ಷನ್‌ಗಳ ನವೀಕರಣ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಪಾದಚಾರಿಗಳ ಸುರಕ್ಷತೆಗಾಗಿ 500 ಕಿ.ಮೀ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ 100 ಹೊಸ ಸ್ಕೈ‌ವಾಕ್‌ಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳ ಮೂಲಕ ಬೆಂಗಳೂರನ್ನು ಜಾಗತಿಕ ಮಟ್ಟದ ನಗರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button