Wednesday, April 30, 2025
29.2 C
Bengaluru
LIVE
ಮನೆರಾಜಕೀಯಮಾರ್ಚ್​​ ಅಂತ್ಯಕ್ಕೆ 1.6 ಲಕ್ಷ ಮನೆಗಳು ಪೂರ್ಣಗೊಳಿಸಲು ಸಿಎಂ ಸೂಚನೆ

ಮಾರ್ಚ್​​ ಅಂತ್ಯಕ್ಕೆ 1.6 ಲಕ್ಷ ಮನೆಗಳು ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು – ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಸೂಚಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸೂಚಿಸಿದರು.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು. ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು. ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ..ಸಿ. ಜಾಫರ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments