ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು ಮಾಹಿತಿ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಮತ್ತಷ್ಟು ಬಿಗಿಯಾಗುತ್ತಿದ್ದು, ಇಂದು ಜಾರಿ ನಿರ್ದೇಶನಾಲಯ ಪ್ರಕರಣದ ಸಂಬಂಧ ಒಟ್ಟು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ.
ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇಡಿ, ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ರೂ. 300 ಕೋಟಿ ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
CM ವಿರುದ್ಧದ ಮೂಡ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿದ ED ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮಂಜೂರಾಗಿದ್ದ ಮುಡಾ ಸೈಟ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ಆಧರಿಸಿ ED FIR ದಾಖಲಿಸಿಕೊಂಡಿತ್ತು. ಸಿದ್ದು ಪತ್ನಿ ಗೆ ನೀಡಿರುವ ಸೈಟ್ ಬಗ್ಗೆ ತನಿಖೆ ಕೈಗೊಂಡಿದ್ದ ಇಡಿ, ಆಕ್ರಮ ಹಣ ವರ್ಗಾವಣೆ ಮಾಡಿ ಬೇನಾಮಿ ಹೆಸರಲ್ಲಿ ನೀಡಲಾಗಿದ್ದ ನೂರಾರು ಸೈಟ್ ಗಳನ್ನು ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಏಜೆಂಟ್ ಗಳು, ಬಿಲ್ಡರ್ ಗಳು ಹಾಗು ಹಲವು ವ್ಯಕ್ತಿಗಳಿಗೆ ಸೇರಿದ 300 ಕೋಟಿ ಜಪ್ತಿ ಮಾಡಿರುವುದಾಗಿ ED ಪತ್ರಿಕಾ ಹೇಳಿಕೆ ನೀಡಿದೆ.