Thursday, August 21, 2025
24.8 C
Bengaluru
Google search engine
LIVE
ಮನೆUncategorizedಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು - ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು – ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:   ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ  ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಈ ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ನೇಹಾ ಕುಟುಂಬಸ್ಥರಿಗೆ ಸಾಂತ್ವಾನ ಹಾಗೂ ಧೈರ್ಯ ಹೇಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರೆಯೆ ನೀಡಿದ ಅವರು, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದರು.

ಗದಗನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದ ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೆಲೆ ಹಲ್ಲೆಯಾಗಿದೆ.  ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗುಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ ಎಂದು ಹೇಳಿದರು.

ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಕುಟುಕಿದರು. ಜೊತೆಗೆ ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ . ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು  ಎಸ್ ಐ ಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ . ಅಪರಾಧ ವಿಭಾಗದ ಡಿಜಿಪಿ ಅವರು ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು  ಬಸವರಾಜ್ ಬೊಮ್ಮಾಯಿ ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments