ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಬೆಂಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲ ಸಚಿವರು, ಶಾಸಕರು ಸೇರಿಕೊಂಡು ಕಳೆದ ಜು.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದರು. ಈ ವೇಳೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆಯೂ ಮನವಿ ಮಾಡಿದ್ದರು. ಆದರೆ, ಬೆಂಗಳೂರು ದಕ್ಷಿಣ ಜಿಲ್ಲಾ ಕೇಂದ್ರವನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com