#Exclusive NewsTop Newsಜಿಲ್ಲೆಸುದ್ದಿ
ಪ್ರೊ.ಮುಜಾಫರ್ ಅಸ್ಸಾದಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.





