ರಾಜಕೀಯಸಿನಿಮಾಸುದ್ದಿ

ಸಿಎಂ ಸಿದ್ದರಾಮಯ್ಯರನ್ನು ʻಸೋಮಾರಿ ಸಿದ್ದುʼ ಎಂದ ನಟ ಅಹಿಂಸ ಚೇತನ್‌!

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ನಟ ಚೇತನ್‌ ಅಹಿಂಸಾ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ.

ಎಷ್ಟು ವಿಪರ್ಯಾಸ. ಅಂಬೇಡ್ಕರ್ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ); ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ. ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು; ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಬರೆದುಕೊಂಡಿದ್ದಾರೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button