Thursday, November 20, 2025
27.5 C
Bengaluru
Google search engine
LIVE
ಮನೆ#Exclusive Newsಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ-ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ-ಸಿದ್ದರಾಮಯ್ಯ

ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ವಿಚಾರವಾಗಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು (BJP) ಪಂಚಮಸಾಲಿಗರಿಗೆ ಟೋಪಿ ಹಾಕಿ ಹೋಗಿದ್ದಾರೆ. ಇವರು 2ಎ ಕೇಳಿದ್ದರೆ, ಅವರು 2ಡಿ ಮಾಡಿದ್ದಾರೆ ಎಂದರು.

ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ತಕರಾರು ಇಲ್ಲ. ಸಂವಿಧಾನ ಪರವಾಗಿ ಹೋರಾಟ ಇರಬೇಕು. ಹೈಕೋರ್ಟ್‌ಗೆ ಅಪಡೇಟ್ ಹಾಕಿದವರು ಯಾರು? ಇದೆಲ್ಲ ಮಾಡಿದ್ದು ಬಿಜೆಪಿ ಸರ್ಕಾರದವರು. ಇದೇ ಸ್ವಾಮೀಜಿಗಳು ಇದ್ದರಲ್ಲ, ರಸೂಲ್ ಎಂಬಾತ ಸುಪ್ರೀಂ ಕೋರ್ಟ್‌ಗೆ  ಹೋದರು. ಆಗಿನ ಅಡ್ವಕೇಟ್ ಜನರಲ್ ಇದರಲ್ಲಿ ಬದಲಾವಣೆ ಮಾಡಲ್ಲ ಎಂದಿದ್ದರು.

ಟ್ರ್ಯಾಕ್ಟರ್‌ ತೆಗೆದುಕೊಂಡು ಹೋರಾಟ ಮಾಡುತ್ತೀವಿ ಎಂದರು. ಆಗ ಕೋರ್ಟ್ ಶಾಂತಿಯುತವಾಗಿ ಮಾಡುವುದಕ್ಕೆ ಹೇಳಿತ್ತು. ಆದರೂ ಕಾನೂನು ಕೈಗೆ ತೆಗೆದುಕೊಂಡರು. ನಾನು ಮೂರು ಜನ ಮಂತ್ರಿಗಳನ್ನು ಕಳಿಸಿದ್ದೆ. ಮಂತ್ರಿಗಳು ಕರೆದಾಗ ಅವರು ಸಿಎಂಗೆ ಮಾತಾಡಿಸುತ್ತೇವೆ ಎಂದರು. ಆದರೆ ನಾನು ಎಲ್ಲ ಕಡೆಗೂ ಹೋಗುವುದಕ್ಕೆ ಆಗುವುದಿಲ್ಲ. ಆದರೂ ನಾನು ಅವರನ್ನು ಮಾತನಾಡಿಸಲು ಕರೆದರೂ ಅವರು ಬರಲಿಲ್ಲ. ಆಗ ಸುವರ್ಣಸೌಧಕ್ಕೆ ನುಗ್ಗಲು ಯತ್ನ ಮಾಡಿದರು. ಕಲ್ಲು ತೂರಾಟ ಮಾಡಿದರು, ಪೊಲೀಸರಿಗೆ ಗಾಯಗೊಂಡಿದ್ದಾರೆ. ನಮ್ಮ ಬಳಿ ಪ್ರೂಫ್ ಇವೆ, ಫೋಟೋ ಬೇಕಾದರೂ ತೋರಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸುಮ್ಮನಿರಲ್ಲ. ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments