ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯಾದ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ, “ಖಮೇನಿ ಹತ್ಯೆಯಾದ ಸುದ್ದಿ ಟಿವಿಯಲ್ಲಿ ಬರುತ್ತಿದೆ, ಇದು ಅತ್ಯಂತ ಖಂಡನೀಯ ಕೃತ್ಯ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶಾಂತಿ ಮಂತ್ರ ಪಠಿಸುತ್ತಲೇ ಯುದ್ಧ ಮಾಡುತ್ತಿರುವುದು ಅವರ ತದ್ವಿರುದ್ಧ ನಿಲುವನ್ನು ತೋರಿಸುತ್ತದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಯುದ್ಧದ ಭೀತಿಯಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆಯೂ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. “ದುಬೈ ವಿಮಾನ ನಿಲ್ದಾಣ ಸದ್ಯಕ್ಕೆ ಮುಚ್ಚಿರುವುದರಿಂದ ಕನ್ನಡಿಗರು ಅತಂತ್ರರಾಗಿದ್ದಾರೆ. ನಾನು ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ವಿಮಾನ ನಿಲ್ದಾಣ ತೆರವುಗೊಂಡ ತಕ್ಷಣ ಪ್ರತಿಯೊಬ್ಬ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.


