Top Newsಸುದ್ದಿ

ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದ: ಸಿಎಂ ಸಿದ್ದರಾಮಯ್ಯ

ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ.

ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು.

ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರವಾಗಿದೆ. ಖಡ್ಗಮಾಲಾ ಸ್ತೋತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಇದು ಮುಕ್ತಿ ನೀಡುತ್ತದೆ ಎನ್ನುವ ನಂಬಿಕೆ ಇದೆ.

ಮುಡಾ ಹಗರಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಸಿಎಂ ತೊಂದರೆ ಎದುರಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button