Tuesday, January 27, 2026
24 C
Bengaluru
Google search engine
LIVE
ಮನೆರಾಜಕೀಯಮೀನುಗಾರರಿಗೆ ಭರ್ಜರಿ ಗಿಫ್ಟ್​​ ಸಿಎಂ ಸಿದ್ದು..!!

ಮೀನುಗಾರರಿಗೆ ಭರ್ಜರಿ ಗಿಫ್ಟ್​​ ಸಿಎಂ ಸಿದ್ದು..!!

ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ ನೀಡಲಾಗುತ್ತದೆ. ಹೊಸ ದೋಣಿ ಮೋಟಾರ್ ಖರೀದಿಗೆ ಶೇ.50 ಸಬ್ಸಿಡಿ ಘೋಷಿಸಲಾಗಿದೆ.

ಹೊಸ ಮೀನುಗಾರಿಕಾ ನೀತಿ ಜಾರಿ..!

ಹೌದು, ಹೊಸ ಮೀನುಗಾರಿಕಾ ನೀತಿ ಜಾರಿಗೆ ಬಂದಿದ್ದು, ಮಂಗಳೂರಿನ ಮೀನುಗಾರಿಕಾ ಕಾಲೇಜನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಹೊಸ ದೋಣಿ ಮೋಟಾರ್ ಖರೀದಿಗೆ ಶೇ.50 ಸಬ್ಸಿಡಿ..!

ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ ನೀಡಲಾಗುತ್ತದೆ. ಹೊಸ ದೋಣಿ ಮೋಟಾರ್ ಖರೀದಿಗೆ ಶೇ.50 ಸಬ್ಸಿಡಿ ಘೋಷಿಸಲಾಗಿದೆ.

ಆಳ ಸಮುದ್ರ ಮೀನುಗಾರಿಕಾ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಕೆ..!

ಮೈಸೂರಿನಲ್ಲಿ ಹೈಟೆಕ್ ಮತ್ಸ್ಯ ದರ್ಶಿನಿ ಆರಂಭವಾಗಲಿದ್ದು, ಮಲ್ಪೆಯಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಆಳ ಸಮುದ್ರ ಮೀನುಗಾರಿಕಾ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲಾಗಿದೆ. ಇನ್ನು ಮೂಲಸೌಕರ್ಯ, ಬಂದರು ಮತ್ತು ಜಲಸಾರಿಗೆ ಕ್ಷೇತ್ರದಲ್ಲೂ ಹಲವು ಮಹತ್ವದ ಯೋಜನೆಗಳು ರೂಪುಗೊಳ್ಳುತ್ತಿವೆ.

ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಸ್ಥಾಪನೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು ನಿರ್ಮಾಣವಾಗಲಿದ್ದು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರದ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆ. ಕಡಲಕೊರೆತ ತಡೆಗಟ್ಟಲು ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಯೋಜನೆ ಜಾರಿಗೆ ಬರಲಿದೆ. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇಂದಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments