
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ, ಕ್ರಸ್ಟ್ ಗೇಟ್ ಸಂಖ್ಯೆ 19ರಲ್ಲಿ ಎರಡು ದಿನಗಳ ಹಿಂದೆ ಉಂಟಾಗಿದ್ದ ತೊಂದರೆಯನ್ನು ಈಗಾಗಲೇ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ತೊಂದರೆಯನ್ನು ಸರಿಪಡಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ, ಹಾಗಾಗಿ ಸ್ಥಳ ವೀಕ್ಷಣೆ ಮಾಡಲು ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ 12:30ಕ್ಕೆ ಹೊಸಪೇಟೆ ತಲುಪಲಿದ್ದಾರೆ, ಜಲಾಶಯ ವೀಕ್ಷಣೆಯ ನಂತರ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ


