ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ ಪ್ರಮಾಣ 204.5 mm ದಾಟುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಬೆಳಗಾವಿ, ಕೊಡಗು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಶಿವಮೊಗ್ಗ-ಚಿಕ್ಕಮಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಮಂಗಳವಾರದಿಂದ ಗುರುವಾರದವರೆಗೂ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೀದರ್ ಹಾಸನ ಮೈಸೂರಲ್ಲಿ ಸಾಧಾರಣ ಮಳೆಯಾಗಲಿರುವುರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿನೋಪ್ಟಿಕ್ ಹವಾಮಾನಶಾಸ್ತ್ರದ ವೈಶಿಷ್ಟ್ಯ:
ಉತ್ತರ ಗುಜರಾತ್ – ಉತ್ತರ ಕೇರಳದ ಉದ್ದಕ್ಕೂ ಸಮುದ್ರ ಮಟ್ಟದಲ್ಲಿ ತೀರದ ಟ್ರಫ್ (ದಟ್ಟ ಮೋಡ) ಮಹಾರಾಷ್ಟ್ರ-ಉತ್ತರ ಕೇರಳ ಕರಾವಳಿಯಲ್ಲಿ ಸಾಗುತ್ತದೆ ಮತ್ತು ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ
* ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.