Saturday, December 6, 2025
25.2 C
Bengaluru
Google search engine
LIVE
ಮನೆ#Exclusive NewsTop Newsಮಾಲೆ ಧರಿಸಿ ಬಂದ ವಿದ್ಯಾರ್ಥಿಗಳ ಹೊರ ಹಾಕಿದ ಕಾಲೇಜು ಆಡಳಿತ ಮಂಡಳಿಗೆ ತರಾಟೆ

ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳ ಹೊರ ಹಾಕಿದ ಕಾಲೇಜು ಆಡಳಿತ ಮಂಡಳಿಗೆ ತರಾಟೆ

ಚಿಕ್ಕಮಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೋರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆದಿದೆ..

ನಗರದ ಎಂಇಎಸ್​​​​ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು.. ಆಡಳಿತ ಮಂಡಳಿ ಮಾಲೆ ತೆಗೆದು ಬನ್ನಿ ಎಂದು ಹೇಳಿದೆ.. ಈ ವಿಷಯ ತಿಳಿದು ಕಾಲೇಜಿಗೆ ಹಿಂದೂ ಸಂಘಟನೆಗಳ ಮುಖಂಡರು, ಬಜರಂಗದಳದ ಮುಖಂಡರು, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್​​ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಸಂತೋಷ್​ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.. ಬುರ್ಖಾ ಧರಿಸಿ ಬರ್ತಾರಲ್ಲ ಅವಾಗ ಸುಮ್ಮನಿರುತ್ತೀರಿ.

ಈಗ ಯಾಕೆ ಸಮಸ್ಯೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ವಾದ ವಿವಾದದ ಬಳಿಕ ಅಂತಿಮವಾಗಿ ಅಯ್ಯಪ್ಪ ಮಾಲೆ ಹಾಕಿಕೊಂಡು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತರಗತಿಗೆ ಕೂಡಲು ಪ್ರಿನ್ಸಿಪಾಲ್ ಅನುಮತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ MES ಪಿಯು ಕಾಲೇಜಿನ ಪ್ರಿನ್ಸಿಪಾಲ್, ನಾವು ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments