ದಾವಣಗೆರೆ: ಮುಖ್ಯಮಂತ್ರಿ ಕುರ್ಚಿ ಕಾಳಗಕ್ಕೆ ಪರಿಹರಿಸಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಬನ್ನಿ. ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಲ್ಲಿಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಮುಂದುವರಿಸಿದಲ್ಲಿ ರೈತರ ಸಮಸ್ಯೆ ಗಳಿಗೆ ಸ್ಪಂದಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರ ಕುರಿತು ವ್ಯಂಗ್ಯವಾಡಿದ್ದಾರೆ..
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಅಧಿಕಾರ ಬದಲಾವಣೆಗೆ ಬಗ್ಗೆ ಲೇವಡಿ ಮಾಡಿದ್ದಾರೆ. ರಾಜ್ಯಕ್ಕೆ ಹಂಗಾಮಿ ಅಥವಾ ಔಟ್ ಗೋಯಿಂಗ್ ಮುಖ್ಯಮಂತ್ರಿಗಳು ಬೇಡ. ಬೆಳಗಾವಿ ಅಧಿವೇಶನಕ್ಕೆ ಬರುವ ಮುಂಚಿತವಾಗಿ ಕುರ್ಚಿ ಕಾಳಗಕ್ಕೆ ಪರಿಹಾರ ಕಂಡುಕೊಂಡು ಬನ್ನಿ ಎಂದು ಒತ್ತಾಯಿಸಿದರು. ರಾಜ್ಯದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಳಗ ನಡೆಯುತ್ತಿದೆ.
ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ಮುಖ್ಯ ಮಂತ್ರಿ ಎಂದು ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ನಿಮ್ಮ ಬಡಿದಾಟಕ್ಕೆ ರೈತರು ಕಂಗಾಲಾ ಗಿದ್ದಾರೆ. ರೈತರು ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು ಎಂದು ಅಪೇಕ್ಷಿಸುತ್ತಿದ್ದಾರೆ. ಕುರ್ಚಿ ಕಾಳಗ ಮುಗಿಸಿಕೊಂಡು, ಪರಿಹಾರ ಕಂಡುಕೊಂಡು ಬೆಳಗಾವಿ ಅಧಿವೇಶನಕ್ಕೆ ಬಂದರೆ ಆಗ ರೈತರ ಸಮಸ್ಯೆಗೆ ಸ್ಪಂದನೆ ಮಾಡಲು ಸಾಧ್ಯವಾಗುತ್ತದೆ. ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ ಸಾಧ್ಯ ವಾಗುತ್ತದೆ ಎಂದು ತಿಳಿಸಿದರು.
ಡಿ.8 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಅನೇಕ ಜ್ವಲಂತ, ಉತ್ತರ ಕರ್ನಾಟಕದ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬುದಾಗಿ ಜನರುಕಾಯುತ್ತಿದ್ದಾರೆ. ಹಾಗಾಗಿ ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡಿಯೇ ಅಧಿವೇಶನ ನಡೆಸಬೇಕಾಗುತ್ತದೆ ಎಂದು ಒತ್ತಾಯಿ ಸಿದರು. ಅಧಿವೇಶನ ಮುಂದೂಡಿದರರೂ ಪರವಾಗಿಲ್ಲ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಗಳು ಉತ್ತರ ಮತ್ತು ಪರಿಹಾರ ಸರ್ಕಾರ ಕೊಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರ ಸಮಸ್ಯೆಗಳಿಗೆ ಯಾವುದೇ ರೀತಿಯಲ್ಲಿ ಸಕರಾತ್ಮಕವಾಗಿ ಸ್ಪಂದನೆ ಮಾಡುತ್ತಿಲ್ಲ ಎಂದು ದೂರಿದರು.
ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆದ ರೈತರು ನಡೆಸುತ್ತಿರುವ ಯಾವುದೇ ಹೋರಾಟಕ್ಕೆ ಕಿವಿಗೊಡದೆ, ಸ್ಪಂದನೆ ಮಾಡದೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


